V.V.Sangha's
Smt. A.S.M. College for Women, Ballari. (Estd.:1969)
(Affiliated to Karnataka State Akkamahadevi Women’s University, Vijayapura.)
AISHE CODE: C-8690, NAAC TRACK ID-KACOGN11970
Recognized under sections 2(f) and 12(B) of the UGC Act 1956
(Accredited by NAAC in IV Cycle)
Internal Quality Assurance Cell (IQAC)
A Special Talk conducted by the Political Science Department on the topic
"International Day of Democracy" on 16.09.2025
Social Media Web link --> https://www.facebook.com/share/p/1Bb3axfuyq/
![]() |
![]() |
Please click on the following web link for the --> Special Talk Report
![]() |
![]() |
Please click on the following web link for the --> Supporting Documents of the Event
ದಿನಾಂಕ:16-09-2025ರಂದು ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ, ರಾಜ್ಯಶಾಸ್ತ್ರ ವಿಭಾಗದ ವತಿಯಿಂದ "ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ"ವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಎo. ಮರಿದೇವಯ್ಯ ರವರು ವಹಿಸಿಕೊಂಡು, ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಬಳ್ಳಾರಿಯ ಸರಳಾದೇವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಬಸವರಾಜ ಕೆ, ಇವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ, ಪ್ರತಿ ವರ್ಷ ಸೆಪ್ಟಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶ್ವದ ಎಲ್ಲಾ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವ, ಅದರ ಪ್ರಾಮುಖ್ಯತೆ, ಮೂಲಭೂತ ಹಕ್ಕುಗಳು, ಮೂಲಭೂತ ಕರ್ತವ್ಯಗಳು, ಎಲ್ಲ ಕ್ಷೇತ್ರಗಳಲ್ಲಿ ಸಂವಿಧಾನದ ಮೂಲಕ ಸಮಾನ ಅವಕಾಶಗಳನ್ನು ನೀಡಿದ ಡಾ. ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ವಿದ್ಯಾರ್ಥಿನಿಯರಿಗೆ ತಿಳಿಸಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದೂಪಂ ಸತೀಶ್ ರವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ರಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಸುಂದರಮೂರ್ತಿಯವರು ಪ್ರಾಸ್ತವಿಕ ನುಡಿ ಮತ್ತು ವೇದಿಕೆ ಮೇಲಿರುವ ಎಲ್ಲರನ್ನು ಸ್ವಾಗತಿಸಿದರು. ರಾಜಶಾಸ್ತ್ರ ವಿಭಾಗದ ಉಪನ್ಯಾಸಕರಾದ V.E ನಂದಿನಿ ಅವರು ಸಂವಿಧಾನದ ಪೂರ್ವ ಪೀಠಿಕೆಯನ್ನು ಓದಿ, ವೇದಿಕೆಯ ಗಣ್ಯರನ್ನು ವಂದಿಸಿದರು. ಬಿ.ಎ ವಿಭಾಗದ ಐದನೇ ಸೆಮಿಸ್ಟರ್ ವಿದ್ಯಾರ್ಥಿನಿಯಾದ ಕು. ಸಿಂಧೂಜ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಬಿ.ಎ ವಿಭಾಗದ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿನಿಯರು ಮತ್ತು ಕಲಾವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಭಾಗವಹಿಸಿದ್ದರು.