V.V. Sangha's
Smt. A.S.M. College for Women, Ballari. (Estd.:1969)
(Affiliated to Karnataka State Akkamahadevi Women’s University, Vijayapura.)
AISHE CODE: C-8690, NAAC TRACK ID-KACOGN11970
Recognized under sections 2(f) and 12(B) of the UGC Act 1956
(Accredited by NAAC B+ Grade in IV Cycle with a CGPA of 2.65/4.00 in 2024)
Internal Quality Assurance Cell (IQAC)
Department of Kannada & Kannada Sangha activity—14.03.2025
https://www.facebook.com/share/p/19y91uigPQ/

ದಿನಾಂಕ:14-03-2025ರಂದು ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ, ಕನ್ನಡ ವಿಭಾಗವು" ಕನ್ನಡ ಸಂಘ"ದ ಅಡಿಯಲ್ಲಿ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಭಾವಗೀತೆ ಮತ್ತು ಜಾನಪದ ಗೀತೆ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. 30 ಜನ ವಿದ್ಯಾರ್ಥಿನಿಯರು "ಸರ್ವಜ್ಞನ ವಚನಗಳಲ್ಲಿ ಸಾಮಾಜಿಕ ಕಳಕಳಿ" ಎಂಬ ವಿಷಯವನ್ನು ಕುರಿತು ಪ್ರಬಂಧವನ್ನು ಬರೆದರು. "ನನ್ನ ನೆಚ್ಚಿನ ವಿಷಯ"ದ ಅಡಿಯಲ್ಲಿ ಕಾವ್ಯ, ಕಥೆ, ಕಾದಂಬರಿ, ನಾಟಕ ಮುಂತಾದ ಕಾವ್ಯ ಪ್ರಕಾರಗಳ ಬಗ್ಗೆ ವಿದ್ಯಾರ್ಥಿನಿಯರು ಭಾಷಣ ಮಾಡಿದರು. ಭಾವಗೀತೆ ಸ್ಪರ್ಧೆಯಲ್ಲಿ 6 ಜನ ವಿದ್ಯಾರ್ಥಿನಿಯರು ಮತ್ತು ಜಾನಪದ ಗೀತೆ ಸ್ಪರ್ಧೆಯಲ್ಲಿ 7 ಜನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಈ ಸ್ಪರ್ಧೆಗಳ ನಿರ್ಣಾಯಕರಾಗಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಗವಿಸಿದ್ದಪ್ಪ ಗದಗ ರವರು ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ.ಕೆ.ಗಂಗಾಧರ ರವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕನ್ನಡ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
